ಗಿರಿ ಪ್ರದೇಶ : ನಿಬಂಧನೆ ಆಧರಿಸಿ ವಾಹನ ಸಂಚಾರಕ್ಕೆ ಅವಕಾಶ
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕು ಕೈಮರದಿಂದ ಅತ್ತಿಗುಂಡಿ ಭಾಗಕ್ಕೆ ಸಂಪರ್ಕಿಸುವ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಅತಿಯಾದ ಮಳೆಯಿಂದ ರಸ್ತೆಯ ಭಾಗ ಕುಸಿದಿದ್ದ ಕಾರಣ ಕೈಮರದಿಂದ ಅತ್ತಿಗುಂಡಿ ಭಾಗದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಬಹುತೇಕ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವರದಿ ಅವಲೋಕಿಸಿ ಕೈಮರ ಚೆಕ್ ಪೋಸ್ಟ್ ಬಳಿಯಿಂದ ಸಿ.ಎನ್.ಆರ್. ಹೋಮ್ ಸ್ಟೇ ವರೆಗಿನ ಭಾಗಗಳಲ್ಲಿ ನಿಬಂಧನೆಗೆ ಒಳಪಟ್ಟು ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ […]
ಚಿಕ್ಕಮಗಳೂರು ನಗರಸಭೆ: ಸುಜಾತ- ಅನು ನೂತನ ಸಾರಥಿಗಳು
ಚಿಕ್ಕಮಗಳೂರು: ಇಲ್ಲಿನ ನಗರ ಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸುಜಾತಾ ಶಿವಕುಮಾರ್ ,ಉಪಾಧ್ಯಕ್ಷರಾಗಿ ಅನುಮಧುಕರ್ ಆಯ್ಕೆಯಾದರು.ನಗರಸಭೆ ಆವರಣದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ತಮ್ಮ ಪ್ರತಿ ಸ್ಪರ್ಧಿಗಳ ವಿರುದ್ಧ 25-10 ಮತಗಳ ಅಂತರದಿಂದ ಜಯಗಳಿಸಿದರುಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ. ಪ್ರಾಣೇಶ್, ಶಾಸಕರಾದ ಸಿ.ಟಿ ರವಿ ,ಎಸ್ .ಎಲ್. ಭೋಜೇಗೌಡ , ಎಚ್. ಡಿ .ತಮ್ಮಯ್ಯ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದ್ದರೂ ಕಾಂಗ್ರೆಸ್ ಸಾಂಕೇತಿಕವಾಗಿ ಅಭ್ಯರ್ಥಿಗಳನ್ನು ಕಣಕ್ಕೆ […]
ಆಸ್ತಿ ಗಾಗಿ ಕಲಹ : ಸಹೋದರಿಯರಿಂದಲೇ ಕೊಲೆ
ಚಿಕ್ಕಮಗಳೂರು : ಆಸ್ತಿಗಾಗಿ ಸಹೋದರನನ್ನೇ ಸಹೋದರಿಯರು ಕೊಲೆ ಮಾಡಿದ ಘಟನೆ ನಡೆದಿದೆ ಬೆಳ್ಳಂಬೆಳಗ್ಗೆ ಕಣ್ಣಿಗೆ ಖಾರದ ಪುಡಿ ಎರಚಿ ಕೊಚ್ಚಿ ರಕ್ತ ಸಂಬಧಿಗಳು ಕೊಲೆ ಮಾಡಿದ್ದಾರೆ ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿದ್ದು, ಭಾವನ ಜೊತೆಗೂಡಿ ಮೂವರು ಸಹೋದರಿಯರೂ ಈ ಕೃತ್ಯ ಎಸಗಿದ್ದಾರೆ. ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು ರಾಘವೇಂದ್ರ (40) ಮೃತ ದುರ್ದೈವಿ ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ […]
ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ : ಭಾರಿ ಮಳೆ ತಂದ ಅವಾಂತರ
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಧಾರಾಕಾರವಾಗಿ ಸುರಿದ ಮಳೆಗೆ ಗುಡ್ಡ ,ಬಂಡೆ ಕಲ್ಲು ಕುಸಿದು ಅಪಾಯದ ಮುನ್ನೆಚ್ಚರಿಕೆ ನೀಡಿದೆ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು,ರಸ್ತೆಯ ನಾಲ್ಕು ಕಡೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 173 ರ ದಕ್ಷಿಣ ಕನ್ನಡ _ಚಿಕ್ಕಮಗಳೂರು ಜಿಲ್ಲಾ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸಬೇಕಾಗಿದೆ. ಮಳೆಯಿಂದ ಜಲಪಾತಗಳು ಮೈತುಂಬಿ ಪ್ರವಾಸಿಗರನ್ನು ಆಕರ್ಷಿಸುತ್ತಿವೆ, ಇನ್ನೊಂದೆಡೆ ಅವಾಂತರಗಳು ಅಪಾಯದ […]
ನಗರಸಭೆ ಚುನಾವಣೆ ; ಸುಜಾತ -ಅನು ಮಧುಕರ್ ಮೈತ್ರಿಕೂಟದ ಅಭ್ಯರ್ಥಿಗಳು
ಚಿಕ್ಕಮಗಳೂರು :ಇಲ್ಲಿನ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಮೈತ್ರಿಕೂಟದ ಅಭ್ಯರ್ಥಿಗಳಾಗಿ ಸುಜಾತ ಶಿವಶಂಕರ್ ಹಾಗೂ ಅನುಮಧುಕರ್ ಆಯ್ಕೆಗೊಂಡಿದ್ದಾರೆ. ಇಂದು ಮಧ್ಯಾಹ್ನ ಒಂದು ಗಂಟೆಗೆ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈಗಾಗಲೇ ಮೈತ್ರಿಕೂಟದ ಸದಸ್ಯರು ನಗರಸಭೆಯುತ್ತ ಪ್ರಯಾಣ ಬೆಳೆಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಬಿಜೆಪಿಗೆ ದೊಡ್ಡ ತಲೆ ನೋವಾಗಿದ್ದು , ಅಳೆದು ತೂಗಿ ಕೆಲವೇ ಕ್ಷಣದ ಮೊದಲು ಅಧ್ಯಕ್ಷ -ಉಪಾಧ್ಯಕ್ಷ ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ಮುದ್ರೆ ಬಿದ್ದಿದೆ. ಕವಿತಾ ಶೇಖರ್ ಹೆಸರು ಮುಂಚೂಣಿಯಲ್ಲಿ ಇದ್ದರೂ ಅಂತಿಮ ಕ್ಷಣದಲ್ಲಿ ಬದಲಾವಣೆ ನಡೆದಿದೆ. ಜೆಡಿಎಸ್ […]
ರಾಣಿಝರಿಗೆ ಆಪತ್ತು :ಗೂಗಲ್ ಮಿಸ್‌ಗೈಡ್ -ಅಧಿಕಾರಿಗಳ ದೌಡು
ಚಿಕ್ಕಮಗಳೂರು: ರಾಣಿ ಝರಿಗೆ ಆಪತ್ತು ಬಂದಿದೆ ಎನ್ನುವ ರೀತಿಯ ಗೂಗಲ್ ಮಾಹಿತಿ ಅಧಿಕಾರಿಗಳನ್ನು ಕ್ಷಣ ಕಾಲ ಗೊಂದಲಕ್ಕೆ ಈಡು ಮಾಡಿದ ಘಟನೆ ನಡೆದಿದೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ ರಾಣಿ ಝರಿ ಪ್ರವಾಸಿ ತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಗೂಗಲ್ ಮ್ಯಾಪ್‌ನಲ್ಲಿ ಬಿರುಕು ಕಂಡು ಬರುತ್ತಿರುವ ಹಿನ್ನೆಲೆ […]