ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ನೆಲದ ಸಂಸ್ಕೃತಿ ಬಿಂಬಿಸುವ ಪ್ರೀ ವೆಡ್ಡಿಂಗ್ ವಿಡಿಯೋ : ಸಾಮಾಜಿಕ ಜಾಲತಾಣದಲ್ಲಿ ಲೈಕೋ ಲೈಕು !!

ಚಿಕ್ಕಮಗಳೂರು : ಚಿತ್ರ ವಿಚಿತ್ರವಾಗಿ ಪ್ರೀ ವೆಡ್ಡಿಂಗ್ ಶೂಟ್ ಮಾಡುವ ಈ ಕಾಲದಲ್ಲಿ ನಮ್ಮ ನೆಲದ ಸಂಸ್ಕೃತಿ ಬಿಂಬಿಸುವ ಪ್ರೀ ವೆಡ್ಡಿಂಗ್ ವಿಡಿಯೋ ಮಾಡಿದ ಈ ಜೋಡಿ ಈಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದೆ. ಉತ್ತರಕನ್ನಡ ಹಾಗೂ ಶಿವಮೊಗ್ಗ ಮೂಲದ ಜೋಡಿಯೊಂದು ಯಕ್ಷಗಾನ ಹಾಗೂ ಭರತನಾಟ್ಯವನ್ನು ಬಿಂಬಿಸುವ ನೃತ್ಯರೂಪಕವನ್ನು ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದು, ನೆಟ್ಟಿಗರ ಮನ ಗೆದ್ದಿದೆ. ಜೋಗ ಸಮೀಪದ ಕಾಳಮಂಜಿಯ ಚಂದನ್ ಕಲಾಹಂಸ ಹಾಗೂ ಯಲ್ಲಾಪುರ ಸಮೀಪದ ಉಮ್ಮಚಗಿಯ ಭಾರ್ಗವಿ ಬಿ.ಎಚ್ ಈ ವಿಡಿಯೋದಲ್ಲಿ ಭಾಗಿಯಾಗಿದ್ದಾರೆ. […]

ಚಿಕ್ಕಮಗಳೂರು: ಹಳದಿ ಅಲರ್ಟ್ -ಪ್ರವಾಸ ಮುಂದೂಡಲು ಸೂಚನೆ

ಚಿಕ್ಕಮಗಳೂರು : ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ಒಂದು ವಾರ ಮುಂದೂಡಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿನ ಹಳ್ಳಿ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು/ಪ್ರವಾಸಿಗರು ಮುಂದಿನ […]

ಅನರ್ಹ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸಲು ಸೂಚನೆ

ಚಿಕ್ಕಮಗಳೂರು : ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುವ ತಾಲ್ಲೂಕಿನ ಎಲ್ಲಾ ಪಡಿತರ ಚೀಟಿದಾರರ ಕುಟುಂಬಗಳು ತಕ್ಷಣವೇ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ. ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ನೌಕರರು ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಉಲ್ಲೇಖಿತ ಪಡಿತರ ಚೀಟಿ […]

ದೇಶದ ಭದ್ರತೆ ಹಾಗೂ ಸುರಕ್ಷತೆಗೆ ಪ್ರಾಣ ಮುಡಿಪಾಗಿಟ್ಟ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ

ಚಿಕ್ಕಮಗಳೂರು : ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹುಮುಖ್ಯ. ದೇಶದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡಿಪಾಗಿಟ್ಟ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಚಿಕ್ಕಮಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಹೇಳಿದರು. ಪೊಲೀಸ್ ಇಲಾಖೆ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಸ್ಮಾರಕ ಆವರಣದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದರು. ದೇಶದ ರಕ್ಷಣೆ, ಜನರ […]