ಮುಳ್ಳಯ್ಯನಗಿರಿ ಸಂರಕ್ಷಿತ ಪ್ರದೇಶದಲ್ಲಿ ‘ಜಾಯ್‌ರೈಡ್’’ ಹೆಲಿಟೂರಿಸಂ ಆರಂಭಕ್ಕೆ ವಿರೋಧ ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಸರ್ಕಾರ ಪರಿಸರದ ಮೇಲಾಗುವ ಪರಿಣಾಮಗಳನ್ನು ಲೆಕ್ಕಿಸದೆ ಹೆಲಿಟೂರಿಸಂ ಆರಂಭಿಸಲು ನಿರ್ಧರಿಸಿರುವುದನ್ನು ಪರಿಸರವಾದಿಗಳು ಆಕ್ಷೇಪಿಸಿದ್ದಾರೆ.ಪ್ರವಾಸೋದ್ಯಮ ಇಲಾಖೆ ‘ಜಾಯ್‌ರೈಡ್’ ಘೋಷವಾಕ್ಯ ಅಡಿ ಪ್ರವಾಸೋದ್ಯಮ ಉತ್ತೇಜಿಸುವ ಮುನ್ನ ಮುಳ್ಳಯ್ಯನಗಿರಿ ಹಾಗೂ ಅದಕ್ಕೆ ಹೊಂದಿಕೊಡಿರುವ ಗಿರಿ ಪ್ರದೇಶದ ಸೂಕ್ಷ್ಮತೆ ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ್ದಾರೆ. ಅನೇಕ ನದಿಗಳ ಉಗಮ ಶೋಲಾ ಕಾಡುಗಳಿಂದ ಕೂಡಿದ ಅತ್ಯಂತ ಉತ್ತಮ ಜಲಮೂಲಕ್ಕೂ ಆಧಾರವಾದ ಮುಳ್ಳಯ್ಯನಗಿರಿ ಬೆಟ್ಟ ಪ್ರದೇಶ […]
ಉಪನಿಷತ್ತುಗಳು ಜ್ಞಾನದೃಷ್ಟಿ ಜೊತೆಗೆ ವೈಜ್ಞಾನಿಕ ದೃಷ್ಟಿಯೂ ಆಗಿದೆ :ಹರಿಹರಪುರ ಶ್ರೀ
ಚಿಕ್ಕಮಗಳೂರು: ಉಪನಿಷತ್ತುಗಳು ಮನುಷ್ಯ ಕುಲಕ್ಕೆ ಜ್ಞಾನದೃಷ್ಟಿ ಮಾತ್ರವಲ್ಲ, ವೈಜ್ಞಾನಿಕ ದೃಷ್ಟಿ ಕೂಡ ಹೌದು. ಅವು ಮಾನವ ಜನಾಂಗಕ್ಕೆ ಬೆಳಕಿನ ಮಾರ್ಗವನ್ನು ತೋರಿಸುತ್ತವೆ ಎಂದು ಹರಿಹರಪುರ ಶ್ರೀಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಹೇಳಿದರು.ಬ್ರಹ್ಮಸಮುದ್ರ ರಂಗಣ್ಣನ ಛತ್ರದಲ್ಲಿ ಉದ್ಭವ ಪ್ರಕಾಶನ ಟ್ರಸ್ಟ್, ಬೆಂಗಳೂರಿನ ಋಷ್ಯಶೃಂಗ ಪ್ರತಿಷ್ಠಾನ ಹಾಗೂ ಬ್ರಾಹ್ಮಣ ಮಹಾಸಭಾದಿಂದ ಏರ್ಪಡಿಸಿದ್ದ ಕ ಡಾ.ಬೆಳವಾಡಿ ಹರೀಶ್ ಭಟ್ಟ ವಿರಚಿತ ನೂರಾರು ಉಪನಿಷತ್ತುಗಳ ಅಧ್ಯಯನದ ಎರಡು ಸಂಪುಟಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಭಗವಂತನ ತತ್ವ, ಆತ್ಮನ ಸ್ವರೂಪ, ಜೀವ, ಜಗತ್ತು, […]
ಬಿನ್ನಡಿ ಗ್ರಾಮಕ್ಕೆ ಕಲುಷಿತ ಕುಡಿಯುವ ನೀರು ಪೂರೈಕೆ : ಆರೋಪ
ಚಿಕ್ಕಮಗಳೂರು:ತರುವೆ ಗ್ರಾಮ ಪಂಚಾಯತಿಗೆ ಸೇರುವ ಬಿನ್ನಡಿ ಗ್ರಾಮಕ್ಕೆ ಬರುವ ಕುಡಿಯುವ ನೀರು ಕಲುಷಿತ ಗೊಂಡಿದ್ದು ಕುಡಿಯಲು ಯೋಗ್ಯವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕುಡಿಯುವ ನೀರಿನ ಟ್ಯಾಂಕ್ ಒಳಗೆ ಕಸ ಹಾಗೂ ಇನ್ನಿತರ ಗಲೀಜು ಸೇರಿಕೊಂಡು ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ ಎಂದಿದ್ದಾರೆ.ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ದಟ್ಟವಾಗಿದ್ದು ಸಂಬಂದ ಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ವಹಿಸುವಂತೆ ಸ್ಥಳೀಯರಾದ ವೆಂಕಟೇಶ್ ಆಗ್ರಹಿಸಿದ್ದಾರೆ .
ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ : ಜೀವ ಉಳಿಸಿದ 112 ಪೊಲೀಸರು
ಚಿಕ್ಕಮಗಳೂರು: ಚಾರ್ಮಾಡಿ ಬಳಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.112 ಸಂಚಾರಿ ಪೊಲೀಸರು ಹಾಸನ ಮೂಲದ ಮನು ಎಂಬುವನನ್ನು ರಕ್ಷಿಸಿ ಉಳಿಸಿದ್ದಾರೆ.ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದ ಮನು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಸಮೀಪ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ.ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.ತಕ್ಷಣ […]