ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಫಾ.ಮಾರ್ಸೆಲ್ ಪಿಂಟೊ

ಚಿಕ್ಕಮಗಳೂರು: ಪೋಷಕರು ಮಕ್ಕಳಿಗೆ ಆಸ್ತಿ ಮಾಡಿ ಇಡದೇ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಚಿಕ್ಕಮಗಳೂರು ಸಂತ ಜೋಸೆಫರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಫಾ.ಮಾರ್ಸೆಲ್ ಪಿಂಟೊ ಹೇಳಿದರು. ಮೂಡಿಗೆರೆತಾಲೂಕಿನ ಬಣಕಲ್ ನಜರೆತ್ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಪೋಷಕರು ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯವಾಗುತ್ತದೆ ಎಂದರು.ಮಕ್ಕಳಿಗೆ ಉತ್ತಮ ಸಂಸ್ಕಾರ,ಶಿಕ್ಷಣ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡಿದರೆ ಮುಂದೆ ಅವರು ಬುದ್ದಿ ಶಕ್ತಿ, ಜ್ಞಾನ,ವಿವೇಕದಿಂದ ನಡೆದು ಉತ್ತುಂಗ ರೀತಿಯಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಹಳೆ […]
ಪಿ. ಎಂ. ವಿಶ್ವಕರ್ಮ ಯೋಜನೆಯಡಿ ಸಾಲ ಮಂಜೂರು ಮಾಡಲು ಸೂಚನೆ

ಚಿಕ್ಕಮಗಳೂರು : ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಟೂಲ್ ಕಿಟ್ ಒದಗಿಸಿ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಿ ಕರಕುಶಲ ಮತ್ತು ಕುಶಲಕರ್ಮಿಗಳ ಕೈ ಬಲಪಡಿಸಲು ಅಗತ್ಯ ಕ್ರಮ ವಹಿಸಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರುಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಕರಕುಶಲ ಮತ್ತು ಕುಶಲ ಕರ್ಮಿಗಳನ್ನು ಆರ್ಥಿಕವಾಗಿ ಬಲಪಡಿಸಿ ಅವರ ಸ್ವ […]