ಚಾರ್ಮಾಡಿ ಘಾಟಿ : ಭಾರೀ ಗಾಳಿ ಹಿನ್ನೆಲೆ : ಧರೆಗೆ ಉರುಳಿದ ಮರ – ಟ್ರಾಫಿಕ್ ಜಾಮ್

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ ಹಿನ್ನೆಲೆ ಮರ ಒಂದು ಧರೆಗೆ ಉರುಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಾರ್ಮಾಡಿ ಘಾಟಿಯ ಮೂರನೇ ತಿರುವಿನ ಸಮೀಪ ಮರ ಉರುಳಿ 3 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ಎರಡೂ ಬದಿಯಲ್ಲಿ ಸಾಲಾಗಿ ನಿಂತ ವಾಹನಗಳು ನಿಂತಿದ್ದವು. ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್.ಒಂದು ಗಂಟೆ ಬಳಿಕ ಸ್ಥಳಕ್ಕೆ ಜೆಸಿಬಿ ತರಿಸಿ ಬಣಕಲ್ ಪೊಲೀಸರು-ಸ್ಥಳಿಯರ ಸಹಕಾರದಿಂದ ತೆರವು ಕಾರ್ಯ ಮಾಡಲಾಯಿತು ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಪೊಲೀಸರು, ಸ್ಥಳಿಯರು […]
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಪಿಕಪ್ ವಾಹನ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

ಚಿಕ್ಕಮಗಳೂರು :ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ .
ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಕಾರಿನ ಮೇಲೆ ದಾಳಿ

ಚಿಕ್ಕಮಗಳೂರು : ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಕಾರಿನ ಮೇಲೆ ದಾಳಿ ನಡೆದಿದೆ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಬಾನೆಟ್, ಗ್ಲಾಸ್, ಬಂಪರ್ ಕಿಡಿಕೇಡಿಗಳು ಒಡೆದಿದ್ದಾರೆ ಕಡೂರು ಪಟ್ಟಣದ ಭರತ್ ಕೆಂಪರಾಜ್,ಮನೆ ಮುಂದೆ ಇದ್ದ ಪಾಟುಗಳನ್ನೂ ಒಡೆದು ಹಾಕಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.