ಮೀಸಲು ಅರಣ್ಯ ಭೂಮಿ ಒತ್ತುವರಿ ಆರೋಪ : ಪ್ರಕರಣ ದಾಖಲು

ಚಿಕ್ಕಮಗಳೂರು : ಮೀಸಲು ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಲೈಫ್ ಲೈನ್ ಫೀಡ್ ಸಂಸ್ಥೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಮುರಾರಿ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದೆ. ಸಾರ್ವಜನಿಕ ದೂರು ಆಧರಿಸಿ ಸ್ಥಳಕ್ಕೆ ತೆರಳಿದ ಅರಣ್ಯ ಸಿಬ್ಬಂದಿ ಸ್ಥಳ ಮಹಜರು ನಡೆಸಿ ಒತ್ತುವರಿಯನ್ನು ಖಚಿತಪಡಿಸಿದೆ. ಅರಣ್ಯ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕಳಸಾಪುರ ಉಪ ವಲಯ ಅರಣ್ಯ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. […]