ಪ್ರಾಣಹಾನಿ : ಸಚಿವರಿಂದ ಪರಿಹಾರದ ಚೆಕ್ ವಿತರಣೆ

ಚಿಕ್ಕಮಗಳೂರು : ಮಳೆಯಿಂದ ಮರ ಬಿದ್ದು ಸಾವಿಗೀಡಾದ ಎನ್.ಆರ್.ಪುರ ತಾಲ್ಲೂಕಿನ ಇಬ್ಬರ ಮನೆಗಳಿಗೆ ತೆರಳಿದ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಾಂತ್ವನ ಹೇಳಿದರಲ್ಲದೆ, ತಲಾ ೫ ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಿದರು. ಖಾಂಡ್ಯ ಹೋಬಳಿ ಬಿಳುಕೊಪ್ಪ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಮೃತಪಟ್ಟ ಅನಿಲ್ ಪಾಯಸ್ ಮನೆಗೆ ತೆರಳಿ ಪರಿಹಾರದ ಚೆಕ್ ವಿತರಿಸಿದರು. ಅದೇ ತಾಲ್ಲೂಕಿನ ಕೊಗ್ರೆ ಬಳಿ ಆಟೋ ರಿಕ್ಷಾದ ಮೇಲೆ ಮರ […]