ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಬಣಕಲ್ ಪಟ್ಟಣದಲ್ಲಿ ಕಾರು ಡಿಕ್ಕಿ :  ದ್ವಿಚಕ್ರವಾಹನ ಜಖಂ -ಇಬ್ಬರಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದಲ್ಲಿ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮೂಡಿಗೆರೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ, ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಿಜಯ್ ಹಾಗೂ ಶೇಖರ್ ಎಂಬವರ ದ್ವಿಚಕ್ರವಾಹನಗಳಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ತೀವ್ರವಾಗಿ ಹಾನಿಗೊಂಡಿದ್ದು ಇಬ್ಬರಿಗೆ ಪೆಟ್ಟಾಗಿದ್ದು ಆಸ್ಪತ್ರೆ ಗೆ ರವಾನಿಸಲಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎನ್ ಆರ್ ಪುರ ಸಮೀಪ ಆನೆ ದಾಳಿ ; ಯುವತಿ ಸಾವು

ಚಿಕ್ಕಮಗಳೂರು : ಜಿಲ್ಲೆಯಎನ್ ಆರ್ ಪುರ ಸಮೀಪದ ಬನ್ನೂರು ಗ್ರಾಮದ ಬಳಿ ಆನೆ ದಾಳಿಗೆ ಯುವತಿ ಸಾವಪ್ಪಿದ ಘಟನೆ ನಡೆದಿದೆ. ಹೊನ್ನಳ್ಳಿ ಮೂಲದ ಅನಿತಾ (25) ಮೃತ ದುರ್ದೈವಿ. ಕಾಫಿ ತೋಟದಲ್ಲಿ ಕೂಲಿ ಕಾರ್ಮಿಕರು ಇವರಾಗಿದ್ದು,ಅಲ್ಲಿನ ತೋಟದ ಸಾಲು ಮನೆಗಳಲ್ಲಿ ವಾಸವಾಗಿದ್ದರು . ಕಳೆದ ರಾತ್ರಿ 9 ಗಂಟೆಗೆ ಮನೆಗೆ ಹೋಗುವಾಗ ಆನೆ ದಾಳಿ ಮಾಡಿದೆ. ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗಕ್ಕೆ ಹೋಗುವಾಗ ಮಾರ್ಗ ಮಧ್ಯೆ ಸಾವಪ್ಪಿದ್ದಾರೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರಣ್ಯ […]