ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಸಾರ್ವಜನಿಕರ ಸುರಕ್ಷತೆಗೆ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: “ಮನೆಮನೆಗೆ ಪೊಲೀಸ್” ಉಪಕ್ರಮವು ಸಮಾಜದಲ್ಲಿ ಅಪರಾಧ ತಡೆಗೆ ಸಹಕಾರಿ ಆಗುವುದಲ್ಲದೆ, ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ವಿಕ್ರಂ ಅಮಟೆ ತಿಳಿಸಿದ್ದಾರೆ. ಸರ್ವರನ್ನೂ ಸಮಾನವಾಗಿ ಒಳಗೊಂಡು ಸಾರ್ವಜನಿಕರು ಈ ಕಾರ್ಯದಲ್ಲಿ ನೇರವಾಗಿ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸಿ, ಸಾಮಾಜಿಕ ಪಿಡುಗುಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ವ್ಯವಸ್ಥೆಯು ಒಂದು ಆಶಾಕಿರಣ ಎಂದಿದ್ದಾರೆ. ಈ ಮೂಲಕ ಪೊಲೀಸರ ಬಗ್ಗೆ ಇರುವ ಭಯದ ಭಾವದ ಬದಲು ವಿಶ್ವಾಸದ ಚಿಹ್ನೆಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು […]

ಅಮೃತಮಹಲ್ ಕಾವಲ್  ಒತ್ತುವರಿ ತೆರವಿಗೆ ಮೀನಮೇಷ – ಅಸಮಾಧಾನ

ಚಿಕ್ಕಮಗಳೂರು : ಜಿಲ್ಲೆಯ ಅಮೃತಮಹಲ್ ಕಾವಲ್‌ನ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಒತ್ತುವರಿಯಾಗಿರುವ ಭೂಪ್ರದೇಶವನ್ನು ತೆರವುಗೊಳಿಸುವಂತೆ ಹಿಂದಿನ ಸಭೆಯಲ್ಲಿ ಸೂಚಿಸಿದ್ದರೂ ಇದುವರೆಗೆ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಜಂಟಿ ಸರ್ವೇ ನಡೆಸಿ ಒತ್ತುವರಿ ತೆರವುಗೊಳಿಸಿ ಅಮೃತಮಹಲ್ ಕಾವಲ್ ಪ್ರದೇಶವನ್ನು ವಶಕ್ಕೆ ಪಡೆಯುವಂತೆ ಸಂಬಂಧಿಸಿದ […]

ಕಳಸ ಸಮೀಪ ದುರಂತ ಪ್ರಕರಣ : ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಚಿಕ್ಕಮಗಳೂರು : ಜೀಪ್ ಸಮೇತ ಯುವಕ ಭದ್ರಾ ನದಿಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ, ಸಂಸದರ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ದಿನ, ಒಂದೇ ಮನೆಯಲ್ಲಿ ಇಬ್ಬರು ಸತ್ತಿದ್ದಾರೆ, ಸೌಜನ್ಯಕ್ಕೂ ಯಾರೂ ಬಂದಿಲ್ಲ ಎಂದು ಕಿಡಿಕದಿದ್ದಾರೆ ನಿನ್ನೆಯಿಂದ ಸಂಜೆಯಿಂದಲೂ ಮೃತದೇಹ ಹುಡುಕುವ ಕಾರ್ಯವನ್ನು ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮಾಡುತ್ತಿದ್ದಾರೆ ಸುರಿಯುತ್ತಿರೋ ಮಳೆ ಮಧ್ಯೆಯೇ ಭದ್ರೆಯ ಒಡಲಲ್ಲಿ ಶವಕ್ಕಾಗಿ ನಿರಂತರವಾಗಿ ಶೋಧ ನಡೆಯುತ್ತಿದೆ ದುಡ್ಡಿದ್ದವರು ಸತ್ರೆ ಬರ್ತಿದ್ರು, ಇವರು ಬಡವರಲ್ವಾ ಏಕೆ ಬರ್ತಾರೆ‌ […]