ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಚಿಕ್ಕಮಗಳೂರು: ಹಳದಿ ಅಲರ್ಟ್ -ಪ್ರವಾಸ ಮುಂದೂಡಲು ಸೂಚನೆ

Share:

ಚಿಕ್ಕಮಗಳೂರು : ರಾಜ್ಯದ ವಿವಿಧ ಸ್ಥಳಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ಒಂದು ವಾರ ಮುಂದೂಡಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿನ ಹಳ್ಳಿ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಭೂಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು/ಪ್ರವಾಸಿಗರು ಮುಂದಿನ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಲಾಗಿದೆ.
ಸಾರ್ವಜನಿಕರು/ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳಿ, ಕೆರೆ ಕಟ್ಟೆಗಳಿಗೆ ತೆರಳಬಾರದು ಎಂದು ಜಿಲ್ಲಾಡಳಿತ ತಿಳಿಸಿದೆ.
ಅತಿಯಾದ ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಹಾಗೂ ಹೋಂ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಅನ್ನು ಒಂದು ವಾರ ಸ್ಥಗಿತಗೊಳಿಸಿ ಮುಂದೂಡಲಾಗಿದೆ.

Leave a Reply

Your email address will not be published. Required fields are marked *

On Key

Related Posts

ಅಮಿತ್ ಶಾ-ಸಿ.ಟಿ.ರವಿ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಧರಣಿ

ಚಿಕ್ಕಮಗಳೂರು:ಕೋಮುವಾದವನ್ನುಮುಂದಿಟ್ಟು ಜನರನ್ನು ಸಂಘರ್ಷಕ್ಕೀಡು ಮಾಡುವಸಂಘಪರಿವಾರದ ಮಾನಸಿಕತೆ ಆಮಿತ್ ಶಾ ಹೇಳಿಕೆಯಿಂದ ಬಹಿರಂಗಗೊಂಡಿದೆ ಎಂದು ಜಿಲ್ಲಾಕಾಂಗ್ರೆಸ್‌ ಉಸ್ತುವಾರಿ, ಮಾಜಿ ಸಚಿವ ರಮಾನಂದ

ನಿಷೇಧಿತ ಮದ್ಯ ವಶ : ಓರ್ವನ ಬಂಧನ

ಚಿಕ್ಕಮಗಳೂರು:  ಅಬಕಾರಿ ಸಿಬ್ಬಂದಿ ದಾಳಿ ನಡೆಸಿಚಿಕ್ಕಮಗಳೂರು ನಗರದ ದರ್ಜಿ ಬೀದಿಯ ಮನೆಯೊಂದರಲ್ಲಿ ದಾಸ್ತಾನು ಇಟ್ಟಿದ್ದ ನಿಷೇಧಿತ ವಿವಿಧ ಬ್ರಾಂಡ್ ಗಳ