ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ : ಜೀವ ಉಳಿಸಿದ 112 ಪೊಲೀಸರು        

Share:

                
ಚಿಕ್ಕಮಗಳೂರು: ಚಾರ್ಮಾಡಿ ಬಳಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
112  ಸಂಚಾರಿ ಪೊಲೀಸರು ಹಾಸನ ಮೂಲದ ಮನು  ಎಂಬುವನನ್ನು ರಕ್ಷಿಸಿ ಉಳಿಸಿದ್ದಾರೆ.
ಹಾಸನದಿಂದ ಕೊಟ್ಟಿಗೆಹಾರಕ್ಕೆ ಬಂದ ಮನು ಚಾರ್ಮಾಡಿ ಘಾಟ್ ಬಳಿ ಏಕಲವ್ಯ ಶಾಲೆಯ ಸಮೀಪ ರಸ್ತೆಯಲ್ಲಿ ತನ್ನ ಕುತ್ತಿಗೆಯನ್ನು ಬ್ಲೇಡಿನಿಂದ ಕುಯ್ದು ಸ್ನೇಹಿತರಿಗೆ ವ್ಯಾಟ್ಸ್ ಆಫ್ ಮೂಲಕ ವೀಡಿಯೋ ಸಂದೇಶ ಕಳುಹಿಸಿದ್ದಾನೆ.
ಅಲರ್ಟ್ ಆದ ಸ್ನೇಹಿತರು 112 ಸಂಚಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.ತಕ್ಷಣ ಕಾರ್ಯ ಪ್ರವೃತ್ತರಾದ  ಪೊಲೀಸರು ಚಾರ್ಮಾಡಿ ಘಾಟ್ ಗೆ ತೆರಳಿ ವ್ಯಕ್ತಿಯಿಂದ ಹರಿತವಾದ ಬ್ಲೇಡ್ ಕಸಿದು ಕೊಂಡಿದ್ದಾರೆ.
ಹರಸಾಹಸ ಪಟ್ಟು ಆತನನ್ನು ಹಿಡಿದು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ,ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಕುತ್ತಿಗೆಗೆ ವೈದ್ಯರಿಂದ ಹೊಲಿಗೆ ಹಾಕಿಸಿ ಪ್ರಾಣ ಉಳಿಸಿದ್ದಾರೆ.
ಬಳಿಕ ಅವರ ಪತ್ನಿಗೆ ಕರೆ ಮಾಡಿ ಅವರೊಂದಿಗೆಕಳುಹಿಸಿದ್ದಾರೆ.ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿ ಬಿ ಎಸ್.ಅಭಿಷೇಕ್,ದಿಲೀಪ್,ಸುಂಕ ಬೋವಿ,ಓಂಕಾರ ನಾಯ್ಕ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

On Key

Related Posts

ಅಮಿತ್ ಶಾ-ಸಿ.ಟಿ.ರವಿ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಧರಣಿ

ಚಿಕ್ಕಮಗಳೂರು:ಕೋಮುವಾದವನ್ನುಮುಂದಿಟ್ಟು ಜನರನ್ನು ಸಂಘರ್ಷಕ್ಕೀಡು ಮಾಡುವಸಂಘಪರಿವಾರದ ಮಾನಸಿಕತೆ ಆಮಿತ್ ಶಾ ಹೇಳಿಕೆಯಿಂದ ಬಹಿರಂಗಗೊಂಡಿದೆ ಎಂದು ಜಿಲ್ಲಾಕಾಂಗ್ರೆಸ್‌ ಉಸ್ತುವಾರಿ, ಮಾಜಿ ಸಚಿವ ರಮಾನಂದ

ನಿಷೇಧಿತ ಮದ್ಯ ವಶ : ಓರ್ವನ ಬಂಧನ

ಚಿಕ್ಕಮಗಳೂರು:  ಅಬಕಾರಿ ಸಿಬ್ಬಂದಿ ದಾಳಿ ನಡೆಸಿಚಿಕ್ಕಮಗಳೂರು ನಗರದ ದರ್ಜಿ ಬೀದಿಯ ಮನೆಯೊಂದರಲ್ಲಿ ದಾಸ್ತಾನು ಇಟ್ಟಿದ್ದ ನಿಷೇಧಿತ ವಿವಿಧ ಬ್ರಾಂಡ್ ಗಳ