ಚಿಕ್ಕಮಗಳೂರು:ತರುವೆ ಗ್ರಾಮ ಪಂಚಾಯತಿಗೆ ಸೇರುವ ಬಿನ್ನಡಿ ಗ್ರಾಮಕ್ಕೆ ಬರುವ ಕುಡಿಯುವ ನೀರು ಕಲುಷಿತ ಗೊಂಡಿದ್ದು ಕುಡಿಯಲು ಯೋಗ್ಯವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕುಡಿಯುವ ನೀರಿನ ಟ್ಯಾಂಕ್ ಒಳಗೆ ಕಸ ಹಾಗೂ ಇನ್ನಿತರ ಗಲೀಜು ಸೇರಿಕೊಂಡು ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ ಎಂದಿದ್ದಾರೆ.
ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ದಟ್ಟವಾಗಿದ್ದು ಸಂಬಂದ ಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ವಹಿಸುವಂತೆ ಸ್ಥಳೀಯರಾದ ವೆಂಕಟೇಶ್ ಆಗ್ರಹಿಸಿದ್ದಾರೆ .