ಶೃಂಗೇರಿ: ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ಈಗ ಆರೋಗ್ಯ ತಪಾಸಣೆ ವೇಳೆ ಘಟನೆ ಹೊರಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಯನ್ನು ಬಂಧಿಸಿದ್ದಾರೆ. ಈತ ತೆಕ್ಕೂರಿನ ಎಸ್ಟೇಟ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಆರೋಪಿಯೂ ಅಪ್ರಾಪ್ತನಾಗಿದ್ದು 17 ವರ್ಷದವನಾಗಿದ್ದಾನೆ, ಈತ ತೆಕ್ಕೂರಿನ ಎಸ್ಟೇಟ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.
ಅಪ್ರಾಪ್ತ ಬಾಲಕನನ್ನು ಕೆಲಸಕ್ಕೆ ಸೇರಿಸಿಕೊಂಡಿರುವ ಮಾಲೀಕನ ವಿರುದ್ಧ ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಕ್ರಮ ಕೈಗೊಳ್ಳಬೇಕಾಗಿದೆ.
ಅಸ್ಸಾಂ ಕಾರ್ಮಿಕರು ಹಾಗೂ ಬಾಂಗ್ಲಾ ನುಸುಳುಕೋರರು ಮಲೆನಾಡಿನ ಎಸ್ಟೇಟ್ ಗಳಲ್ಲಿ ನುಸುಳಿಕೊಂಡಿದ್ದು ಕಡಿಮೆ ಕೂಲಿಗೆ ಸಿಗುತ್ತಾರೆ ಎಂಬ ಕಾರಣಕ್ಕೆ ಎಸ್ಟೇಟ್ ಮಾಲೀಕರು ಕಾನೂನನ್ನು ಗಾಳಿಗೆ ತೂರಿ ಕೆಲಸಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಎನ್ನುವ ಆರೋಪವು ಇದೆ.