ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ರಾಣಿಝರಿಗೆ ಆಪತ್ತು :ಗೂಗಲ್ ಮಿಸ್‌ಗೈಡ್ -ಅಧಿಕಾರಿಗಳ ದೌಡು

Share:

ಚಿಕ್ಕಮಗಳೂರು: ರಾಣಿ ಝರಿಗೆ ಆಪತ್ತು ಬಂದಿದೆ ಎನ್ನುವ ರೀತಿಯ ಗೂಗಲ್ ಮಾಹಿತಿ ಅಧಿಕಾರಿಗಳನ್ನು ಕ್ಷಣ ಕಾಲ ಗೊಂದಲಕ್ಕೆ ಈಡು ಮಾಡಿದ ಘಟನೆ ನಡೆದಿದೆ
ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ ರಾಣಿ ಝರಿ ಪ್ರವಾಸಿ ತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದೆ.
ಗೂಗಲ್ ಮ್ಯಾಪ್‌ನಲ್ಲಿ ಬಿರುಕು ಕಂಡು ಬರುತ್ತಿರುವ ಹಿನ್ನೆಲೆ ಪುತ್ತೂರು ಉಪವಿಭಾಗಾಧಿಕಾರಿಗಳು ರಾಣಿಝರಿ ಸಮೀಪ ಭಾರಿ ಮಳೆಯಾಗುತ್ತಿರುವುದರಿಂದ `ಭೂ ಕುಸಿತ’ವಾಗುವ ಸಂಭವವಿದೆ ಎಂದು ಚಿಕ್ಕಮಗಳೂರು ಉಪವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಎಚ್ಚೆತ್ತ ಉಪವಿಭಾಗಾಧಿಕಾರಿಗಳ ಸೂಚನೆಯ ಮೇರೆಗೆ ನಿಡುವಾಳೆ ಮತ್ತು ಸುಂಕಸಾಲೆ ಗ್ರಾಮ ಲೆಕ್ಕಾಧಿಕಾರಿಗಳಾದ ಜಯಪ್ರಕಾಶ್ ಮತ್ತು ಮಹೇಶ್ ಸ್ಥಳ್ಕಕೆ ತೆರಳಿ ಪರಿಶೀಲಿಸಿ ಭೂಕುಸಿತ ಹಾಗೂ ಬಿರುಕು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.
ಸದ್ಯಕ್ಕೆ ಯಾವುದೇ ಆಪತ್ತು ಇಲ್ಲದ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ

Leave a Reply

Your email address will not be published. Required fields are marked *

On Key

Related Posts

ಅಮಿತ್ ಶಾ-ಸಿ.ಟಿ.ರವಿ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಧರಣಿ

ಚಿಕ್ಕಮಗಳೂರು:ಕೋಮುವಾದವನ್ನುಮುಂದಿಟ್ಟು ಜನರನ್ನು ಸಂಘರ್ಷಕ್ಕೀಡು ಮಾಡುವಸಂಘಪರಿವಾರದ ಮಾನಸಿಕತೆ ಆಮಿತ್ ಶಾ ಹೇಳಿಕೆಯಿಂದ ಬಹಿರಂಗಗೊಂಡಿದೆ ಎಂದು ಜಿಲ್ಲಾಕಾಂಗ್ರೆಸ್‌ ಉಸ್ತುವಾರಿ, ಮಾಜಿ ಸಚಿವ ರಮಾನಂದ

ನಿಷೇಧಿತ ಮದ್ಯ ವಶ : ಓರ್ವನ ಬಂಧನ

ಚಿಕ್ಕಮಗಳೂರು:  ಅಬಕಾರಿ ಸಿಬ್ಬಂದಿ ದಾಳಿ ನಡೆಸಿಚಿಕ್ಕಮಗಳೂರು ನಗರದ ದರ್ಜಿ ಬೀದಿಯ ಮನೆಯೊಂದರಲ್ಲಿ ದಾಸ್ತಾನು ಇಟ್ಟಿದ್ದ ನಿಷೇಧಿತ ವಿವಿಧ ಬ್ರಾಂಡ್ ಗಳ