ಚಿಕ್ಕಮಗಳೂರು :ಇಲ್ಲಿನ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಮೈತ್ರಿಕೂಟದ ಅಭ್ಯರ್ಥಿಗಳಾಗಿ ಸುಜಾತ ಶಿವಶಂಕರ್ ಹಾಗೂ ಅನುಮಧುಕರ್ ಆಯ್ಕೆಗೊಂಡಿದ್ದಾರೆ.
ಇಂದು ಮಧ್ಯಾಹ್ನ ಒಂದು ಗಂಟೆಗೆ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈಗಾಗಲೇ ಮೈತ್ರಿಕೂಟದ ಸದಸ್ಯರು ನಗರಸಭೆಯುತ್ತ ಪ್ರಯಾಣ ಬೆಳೆಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಬಿಜೆಪಿಗೆ ದೊಡ್ಡ ತಲೆ ನೋವಾಗಿದ್ದು , ಅಳೆದು ತೂಗಿ ಕೆಲವೇ ಕ್ಷಣದ ಮೊದಲು ಅಧ್ಯಕ್ಷ -ಉಪಾಧ್ಯಕ್ಷ ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ಮುದ್ರೆ ಬಿದ್ದಿದೆ.
ಕವಿತಾ ಶೇಖರ್ ಹೆಸರು ಮುಂಚೂಣಿಯಲ್ಲಿ ಇದ್ದರೂ ಅಂತಿಮ ಕ್ಷಣದಲ್ಲಿ ಬದಲಾವಣೆ ನಡೆದಿದೆ. ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಶೀಲಾ ದಿನೇಶ್ ಗೆ ಎರಡನೇ ಅವಧಿಗೆ ಅವಕಾಶ ಕಲ್ಪಿಸುವ ಸಾಧ್ಯತೆಗಳಿದೆ.