ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಆಕಸ್ಮಿಕ ಬೆಂಕಿ ತಗಲಿ ಖಾಸಗಿ ಹಣಕಾಸು ಸಂಸ್ಥೆ ಕಚೇರಿ  ಭಸ್ಮ

Share:

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ತಗಲಿ ಖಾಸಗಿ ಹಣಕಾಸು ಸಂಸ್ಥೆಯ ಕಚೇರಿ  ಭಸ್ಮವಾಗಿದೆ.
ಮೂಡಿಗೆರೆ ಪಟ್ಟಣದ ಮೇಗಲಪೇಟೆ ಕೆನರಾ ಬ್ಯಾಂಕ್ ಇರುವ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಛೇರಿ ಬಹುತೇಕ ಸುಟ್ಟು ಭಸ್ಮವಾಗಿದೆ.
ಮಂಗಳವಾರ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಸಮಯದಲ್ಲಿ ಕಟ್ಟಡದಿಂದ ಶಬ್ದ ಮತ್ತು ಹೊಗೆ ಬರುತ್ತಿರುವುದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಕಟ್ಟಡದ ಮಾಲೀಕರು ಮತ್ತು ಅಗ್ನಿಶಾಮಕ ಕಛೇರಿಗೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ವಾಹನ ಬರುವ ಹೊತ್ತಿಗಾಗಲೇ ಶ್ರೀರಾಮ್ ಫೈನಾನ್ಸ್ ಕಛೇರಿ ಬಹುತೇಕ ಸುಟ್ಟು ಕರಕಲಾಗಿದೆ. ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿನಂದಿಸುವ ಕಾರ್ಯದಲ್ಲಿ ನಿರತರಾದರು.
ರಾತ್ರಿ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.  ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.
ಶ್ರೀರಾಮ್ ಫೈನಾನ್ಸ್ ಕಛೇರಿ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿವೆ. ಲಾಕರ್ ನಲ್ಲಿದ್ದು ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.

ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಕಛೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸುವ ಅಪಾಯ ಎದುರಾಗಿತ್ತು. ಕಟ್ಟಡದಲ್ಲಿದ್ದ ವಾಸವಾಗಿದ್ದ ಮನೆಗಳ ನಿವಾಸಿಗಳು ಮುಂಜಾಗೃತ ಕ್ರಮವಾಗಿ ಪ್ರಮುಖ ವಸ್ತುಗಳೊಂದಿಗೆ ಮನೆಯಿಂದ ಹೊರಗೆ ಬಂದಿದ್ದರು. ಬೆಂಕಿ ತಗುಲಿದ್ದ ಕಛೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಕಟ್ಟಡದಲ್ಲಿ ಇರುವ ಮನೆಗಳ ನೆಲ ಮತ್ತು ಗೋಡೆಗಳು ಶಾಖದಿಂದ ಬಿಸಿಯಾಗಿದೆ.

ಕೆನರಾ ಬ್ಯಾಂಕ್ ಕಛೇರಿಗೆ ಬೆಂಕಿ ತಗುಲಿದ್ದರೆ ಅಪಾರ ಪ್ರಮಾಣದ ನಷ್ಟ, ದಾಖಲೆ ನಷ್ಟ ಸಂಭವಿಸುತ್ತಿತ್ತು.

ಸದರಿ ಕಟ್ಟಡವು ಪಟ್ಟಣದ ಶಿವಪ್ರಕಾಶ್ ಅವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಲುಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳೀಯ ನಿವಾಸಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Leave a Reply

Your email address will not be published. Required fields are marked *

On Key

Related Posts

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಹತ್ತು ಹಲವು ಕ್ರಮ

ಚಿಕ್ಕಮಗಳೂರು : ಮುಳ್ಳಯ್ಯನಗಿರಿ ಭಾಗದಲ್ಲಿ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು

ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ : ಜಿಲ್ಲಾಧಿಕಾರಿ

ಚಿಕ್ಕಮಗಳೂರು :ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರು ಮತ್ತು ಸ್ಥಳೀಯ ಜನತೆಯ ಹಿತದೃಷ್ಟಿಯಿಂದ ಗಿರಿ ಪ್ರದೇಶದ ಕೆಲವು ಪ್ರವಾಸೋದ್ಯಮ ಸ್ಥಳಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ

ಹಾಸ್ಟೆಲ್ ಗಳಿಗೆ  ‘ಆರಕ್ಷಕ ಗೆಳತಿ’ ಭೇಟಿ : ಕುಂದು ಕೊರತೆ ವಿಚಾರಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ 91 ಬಾಲಕಿಯರ ಹಾಸ್ಟೆಲ್‌ಗಳಿಗೆ ಮಹಿಳಾ ಪಿಎಸ್‌ಐಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿದ್ದು ತಿಂಗಳಲ್ಲಿ ಒಂದು ಬಾರಿ ಹಾಸ್ಟೆಲ್

ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

ಚಿಕ್ಕಮಗಳೂರು:ವಿದ್ಯುತ್ ತಂತಿ ಸ್ವರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ