ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ.
ಧಾರಾಕಾರವಾಗಿ ಸುರಿದ ಮಳೆಗೆ ಗುಡ್ಡ ,ಬಂಡೆ ಕಲ್ಲು ಕುಸಿದು ಅಪಾಯದ ಮುನ್ನೆಚ್ಚರಿಕೆ ನೀಡಿದೆ
ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು,ರಸ್ತೆಯ ನಾಲ್ಕು ಕಡೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ.
ರಾಷ್ಟ್ರೀಯ ಹೆದ್ದಾರಿ 173 ರ
ದಕ್ಷಿಣ ಕನ್ನಡ _ಚಿಕ್ಕಮಗಳೂರು ಜಿಲ್ಲಾ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸಬೇಕಾಗಿದೆ.
ಮಳೆಯಿಂದ ಜಲಪಾತಗಳು ಮೈತುಂಬಿ ಪ್ರವಾಸಿಗರನ್ನು ಆಕರ್ಷಿಸುತ್ತಿವೆ, ಇನ್ನೊಂದೆಡೆ ಅವಾಂತರಗಳು ಅಪಾಯದ ಸುಳಿವನ್ನು ನೀಡಿವೆ.