ಚಿಕ್ಕಮಗಳೂರು-ತಾಲ್ಲೂಕಿನ ಮಲ್ಲೇನಹಳ್ಳಿ ಬಿಂಡಿಗ ದೇವಿರಮ್ಮನವರ ದೀಪೋತ್ಸವ ಅ.೩೧ ರಿಂದ ನ.೩ ರವರೆಗೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಕುಲಶೇಖರ್ ತಿಳಿಸಿದ್ದಾರೆ.
ಅ.೩೧ ರಂದು ಬೆಳಗ್ಗೆ ಶ್ರೀದೇವಿರಮ್ಮನ ಬೆಟ್ಟದಲ್ಲಿ ಅಭಿಷೇಕ ನಂತರ ಪೂಜೆ ಪ್ರಾರಂಭ. ರಾತ್ರಿ ೭ ಗಂಟೆಗೆ ದೀಪೋತ್ಸವ, ನ.೧ ರಂದು ಬೆಳಗ್ಗೆ ೯.೩೦ ಕ್ಕೆ ದೇವಿರಮ್ಮನ ದೇವಸ್ಥಾನದಲ್ಲಿ ಶ್ರೀ ದೇವಿಯವರಿಗೆ ಉಡುಗೆ, ಪೂಜೆ, ಸಂಜೆ ೪ ಗಂಟೆಗೆ ಭಕ್ತ-ಭಾವಗೀತೆಗಳ ಕಾರ್ಯಕ್ರಮ, ನಂತರ ಬೆಣ್ಣೆ ಬಟ್ಟೆ ಸುಡುವುದು(ಬೆಣ್ಣೆ ಬಟ್ಟೆ ದೇವಾಲಯದಲ್ಲಿ ದೊರೆಯುತ್ತದೆ), ಮಂಗಳಾರತಿ, ಪ್ರಸಾದ ವಿನಿಯೋಗ ಜರುಗಲಿದೆ .
ನ.೨ ರಂದು ಬೆಳಗ್ಗೆ ೮ ಗಂಟೆಗೆ ದೇವಿರಮ್ಮನವರ ಮಹಾ ಮಂಗಳಾರತಿ, ಪೂಜಾ ಕಾರ್ಯಕ್ರಮಗಳು, ಸಂಜೆ ೫ ಗಂಟೆಗೆ ಭರತನಾಟ್ಯ ಕಾರ್ಯಕ್ರಮ, ರಾತ್ರಿ ಶ್ರೀದೇವಿ ಸನ್ನಿಧಿಯಲ್ಲಿ ಮಹಾ ಗಣಪತಿ ಪೂಜೆ, ಪುಣ್ಯಾಹ, ಅಗ್ನಿ ಕುಂಡ ಪೂಜೆ, ಕಳಸ ಸ್ಥಾಪನೆ, ಕುಂಕುಮಾರ್ಚನೆ ನಡೆಯಲಿವೆ .
ನ.೩ ರಂದು ಸೂರ್ಯೋದಯಕ್ಕೆ ಕೆಂಡಾರ್ಚನೆ ನಂತರ ಮಹಾ ಮಂಗಳಾರತಿ, ಹರಕೆ ಒಪ್ಪಿಸುವುದು, ತೀರ್ಥ ಪ್ರಸಾದ ವಿನಿಯೋಗ ಜರುಗಲಿದೆ.
ಶ್ರೀಕ್ಷೇತ್ರದಲ್ಲಿ ಪ್ರಸಾದ ವಿನಿಯೋಗಕ್ಕಾಗಿ ಅಕ್ಕಿ, ಬೇಳೆ, ಎಣ್ಣೆ ಹಾಗೂ ದನ ಸಹಾಯ ಮಾಡುವವರು ಶ್ರೀಕ್ಷೇತ್ರಕ್ಕೆ ತಂದು ಒಪ್ಪಿಸಬಹುದಾಗಿದೆ. ಬೆಟ್ಟದಮೇಲೆ ತೆಂಗಿನ ಒಡೆಯುವುದನ್ನು ನಿಷೇಧಿಸಲಾಗಿದೆ. ಇದೇ ದಿನ ದೇವಿರಮ್ಮನವರ ದೇವಸ್ಥಾನದಲ್ಲಿ ಹಣ್ಣುಕಾಯಿ ಪೂಜೆ ಇರುತ್ತದೆ .
ಬೆಟ್ಟದಲ್ಲಿ ಹಾಗೂ ದೇವಸ್ಥಾನದ ಸುತ್ತಮುತ್ತ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಭಕ್ತಾದಿಗಳಿಗಾಗಿ ತರೀಕೆರೆ, ಬೀರೂರು, ಕಡೂರು, ಚಿಕ್ಕಮಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.