ಚಿಕ್ಕಮಗಳೂರು :- ತಾಲ್ಲೂಕು ಮಟ್ಟದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆ.೨೮ ಮತ್ತು ೨೯ ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶಾಸಕರೂ ಆದ ಸಮ್ಮೇಳನ ಗೌರವಾಧ್ಯಕ್ಷ ಎಚ್.ಡಿ. ತಮ್ಮಯ್ಯ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಕುರಿತ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ ಅಂದಿನ ಕಾರ್ಯ ಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೆರವೇರಿಸಲಿದ್ದಾರೆ ಎಂದರು,
ಹೆಸರಾಂತ ಸಾಹಿತಿಗಳನ್ನು ಆಹ್ವಾನಿಸಿ ಎರಡು ದಿನಗಳ ಕಾಲ ಸಾಹಿತ್ಯದ ಕಂಪನ್ನು ಜನತೆಗೆ ಮುಟ್ಟಿ ಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೇಳಿದರು.
ಸ್ವಾಗತ ಸಮಿತಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ ಸಮ್ಮೇಳನ ಅದ್ದೂರಿಯಾಗಿ ಹಮ್ಮಿ ಕೊಳ್ಳುವ ದೃಷ್ಟಿಯಿಂದ ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಬೋಜೇಗೌಡರೊಂದಿಗೆ ಮಾತುಕತೆ ನಡೆಸಲಾಗಿದ್ದು ಸಂಪೂರ್ಣ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ ಎಂದರು.
ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ ತಾಲ್ಲೂಕಿನ ಸಾಧನೆಗೈದ ಅನೇಕರಿಗೆ ಕನ್ನಡಶ್ರೀ, ಸಾಹಿತ್ಯಶ್ರೀ ಪ್ರಶಸ್ತಿ, ಕಲೆ, ಸಂಗೀತ, ಸಾಹಿತ್ಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು ಎಂದರು. ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.