ಚಿಕ್ಕಮಗಳೂರು: ತಾಲ್ಲೂಕಿನ ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಂಬಿಕಾ ಮಧುಸೂಧನ್ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿ ರಂಗನಾಥ್ ಅವಿರೋಧ ಆಯ್ಕೆಯನ್ನು ಘೋಷಿಸಿದರು. ನೂತನ ಉಪಾಧ್ಯಕ್ಷೆ ಅಂಬಿಕಾ ಮಧುಸೂದನ್, ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಶುದ್ಧ ಕುಡಿಯುವ ನೀರು,ಸುರಕ್ಷಿತ ರಸ್ತೆ ಹಾಗೂ ವಿದ್ಯುತ್ ಕಂಬಗಳನ್ನು ಅಳವಡಿಸಿ ನಿವಾಸಿಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಸoವಿಧಾನದ ಅಧಿಕಾರದಡಿ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಿಗೆ ಸರ್ಕಾರಗಳ ಸೌಲಭ್ಯಗಳನ್ನು ಸರ್ವರಿಗೂ ಸಮಾನವಾಗಿ ಹಂಚುವ ಮೂಲಕ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.
ಗ್ರಾ.ಪಂ. ಅಧ್ಯಕ್ಷ ಹೂವಪ್ಪಶೆಟ್ಟಿ, ಸದಸ್ಯರು ಉಪಸ್ಥಿತರಿದ್ದರು.