ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವು

Share:

ಚಿಕ್ಕಮಗಳೂರು : ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವಪ್ಪಿದ ಘಟನೆ ನಡೆದಿದೆ
ಮಧ್ಯಪ್ರದೇಶ ಮೂಲದ ಸುನೀತಾ ಎಂಬುವರ ಸೀಮಾ (6), ರಾಧಿಕಾ (2) ಮೃತರು.
ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಈ ದುರಂತ ನಡೆದಿದೆ.
ಕೂಲಿಗಾಗಿ ಮಧ್ಯಪ್ರದೇಶದಿಂದ ಬಂದು ತೋಟದ ಮನೆಯಲ್ಲಿದ್ದು,
ಮಕ್ಕಳನ್ನು ಮನೆಯಲ್ಲೇ ಬಿಟ್ಟು ತೋಟದ ಕೆಲಸಕ್ಕೆ ತಾಯಿ ಹೋಗಿದ್ದಳು.
ಸಂಜೆ ಮನೆಗೆ ಬಂದಾಗ ಮಕ್ಕಳು ಇಲ್ಲದ್ದನ್ನು ಕಂಡು ತಾಯಿ ಆತಂಕಗೊಂಡಿದ್ದು, ಇತರೆ ಕಾರ್ಮಿಕರು ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳ ಮೃತದೇಹ ಪತ್ತೆಯಾಗಿದೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

On Key

Related Posts