ಚಿಕ್ಕಮಗಳೂರು :ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರು ಆದ ಗೃಹ ಮಂಡಳಿ ಬಡಾವಣೆ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ದೇವೇಂದ್ರ ಅವರನ್ನು ಅಮಾನತು ಮಾಡಲಾಗಿದೆ.
ಸಂಘದ ಅಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡರ ವಿರುದ್ಧ ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸಿ, ಆಮಿಷ ಒಡ್ಡಿ ನೌಕರರಿಗೆ ಬೆದರಿಕೆ ಹಾಕುತ್ತಿದ್ದಾರೆ ಸೇರಿದಂತೆ ಅನೇಕ ಆಪಾದನೆಗಳನ್ನು ಹೊರಿಸಿ ಸುದ್ದಿಗೋಷ್ಠಿ ನಡೆಸಿದ್ದರು.
ಸಾರ್ವಜನಿಕ ಜೀವನಕ್ಕೆ ಕಳಂಕ, ಜನಪ್ರತಿನಿಧಿಗಳ ತೇಜೋವಧೆ ಮಾಡಿದ್ದು ಇವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಎಸ್. ಎಲ್. ಭೋಜೆಗೌಡ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದರು.
ಆರೋಪದ ಹಿನ್ನೆಲೆಯಲ್ಲಿ ವರದಿ ತರಿಸಿಕೊಂಡ ನಿರ್ದೇಶಕಿ ಸಿಂಧೂ ರೂಪೇಶ್ ಅಮಾನತು ಆದೇಶ ಹೊರಡಿಸಿದ್ದಾರೆ.