ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ : ಈಶ್ವರ ಖಂಡ್ರೆ

Share:


ಚಿಕ್ಕಮಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ  ನಾನಾ ಭಾಗದಲ್ಲಿನ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು  ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದರು.
ಬಾಳೆಹೊನ್ನೂರಿನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯ ಸರ್ಕಾರವು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಫಲವಾಗಿ ಕರ್ನಾಟಕದಲ್ಲಿ 6395 ಆನೆಗಳಿದೆ ಎಂದರು.
ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೆ, ಹುಲಿಯ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಅರಣ್ಯ ಪ್ರದೇಶ ಕಡಿಮೆ ಆಗುತ್ತಿರುವುದರಿಂದ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳವಾಗಿದ್ದು ಇದರ ನಿಯಂತ್ರಣಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ ಎಂದು ಹೇಳಿದರು
ಆನೆಗಳು ನಾಡಿಗೆ ಬರುವುದನ್ನು ತಡೆಯಲು ರೈಲ್ವೆ ಬ್ಯಾರಿಕೇಡ್, ಕಂದಕ, ಸೌರ  ಬೇಲಿ ಹಾಕಲಾಗುತ್ತಿದೆ. ತುರ್ತು ಸ್ಪಂದನ ಪಡೆ, ಆನೆ ಕಾರ್ಯಪಡೆಯನ್ನು ರಚಿಸಿದ್ದು, ಜನರಿಗೆ ಆನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ,ಇದರ ಜೊತೆಗೆ 2 ಸಾವಿರ ಹೆಕ್ಟೇರ್  ಪ್ರದೇಶದಲ್ಲಿ ಆನೆಗಳ ವಿಹಾರಧಾಮ ನಿರ್ಮಿಸಲು ಕ್ರಮ ವಹಿಸಲಾಗಿದೆ ಎಂದರು.
ಪಂಚಮಸಾಲಿ ಸಮುದಾಯಕ್ಕೆ ಮೀಸಲು ಹೋರಾಟದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಸರ್ಕಾರ ಶಾಶ್ವತ ಹಿಂದುಳಿದವರ್ಗಗಳ ಆಯೋಗವನ್ನು ಸಾಂವಿಧಾನಿಕವಾಗಿ ರಚಿಸಿದೆ ಎಂದು ಹೇಳಿದರು.
ಅದು ಅಧ್ಯಯನ ಮಾಡಿ ವರದಿ ನೀಡುತ್ತದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದಲ್ಲಿ ಈ ಬಗ್ಗೆ ಪರಾಮರ್ಶಿಸಿ, ಯಾವುದೆ ಜಾತಿಯ ಜನರಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಶಾಸಕರಾದ ಟಿ.ಡಿ . ರಾಜೇಗೌಡ, ಎಚ್. ಡಿ. ತಮ್ಮಯ್ಯ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

On Key

Related Posts

ಅಮಿತ್ ಶಾ-ಸಿ.ಟಿ.ರವಿ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಧರಣಿ

ಚಿಕ್ಕಮಗಳೂರು:ಕೋಮುವಾದವನ್ನುಮುಂದಿಟ್ಟು ಜನರನ್ನು ಸಂಘರ್ಷಕ್ಕೀಡು ಮಾಡುವಸಂಘಪರಿವಾರದ ಮಾನಸಿಕತೆ ಆಮಿತ್ ಶಾ ಹೇಳಿಕೆಯಿಂದ ಬಹಿರಂಗಗೊಂಡಿದೆ ಎಂದು ಜಿಲ್ಲಾಕಾಂಗ್ರೆಸ್‌ ಉಸ್ತುವಾರಿ, ಮಾಜಿ ಸಚಿವ ರಮಾನಂದ

ನಿಷೇಧಿತ ಮದ್ಯ ವಶ : ಓರ್ವನ ಬಂಧನ

ಚಿಕ್ಕಮಗಳೂರು:  ಅಬಕಾರಿ ಸಿಬ್ಬಂದಿ ದಾಳಿ ನಡೆಸಿಚಿಕ್ಕಮಗಳೂರು ನಗರದ ದರ್ಜಿ ಬೀದಿಯ ಮನೆಯೊಂದರಲ್ಲಿ ದಾಸ್ತಾನು ಇಟ್ಟಿದ್ದ ನಿಷೇಧಿತ ವಿವಿಧ ಬ್ರಾಂಡ್ ಗಳ