ಚಿಕ್ಕಮಗಳೂರು: ಅಬಕಾರಿ ಸಿಬ್ಬಂದಿ ದಾಳಿ ನಡೆಸಿಚಿಕ್ಕಮಗಳೂರು ನಗರದ ದರ್ಜಿ ಬೀದಿಯ ಮನೆಯೊಂದರಲ್ಲಿ ದಾಸ್ತಾನು ಇಟ್ಟಿದ್ದ ನಿಷೇಧಿತ ವಿವಿಧ ಬ್ರಾಂಡ್ ಗಳ ಮ ಮದ್ಯ ವಶಪಡಿಸಿಕೊಂಡಿದೆ .
ಎಂ.ಕೆ. ಮಧುಕರ್ ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಗೋವಾ ರಾಜ್ಯದಲ್ಲಿ ತಯಾರಿಸಿ ಕರ್ನಾಟಕ ರಾಜ್ಯದಲ್ಲಿ ಮಾರಾಟಕ್ಕೆ ನಿಷೇಧಿತ ವಿವಿಧ ಬ್ರಾಂಡ್‌ಗಳ ಒಟ್ಟು ೨೮.೨೫೦ ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಗಯಾಸ್ ಪಾಷಾ, ಅಬಕಾರಿ ಉಪ ನಿರೀಕ್ಷಕರು, ಸಿಬ್ಬಂದಿಗಳಾದ ಗುರುಬಸವರಾಜ ಬಂಗಾರಿ, ತೀಥೇಶ ಬಿ.ಕೆ. ಭಾಗವಹಿಸಿದ್ದರು.