ಚಿಕ್ಕಮಗಳೂರು: ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಸಲಹಾ ಸಮಿತಿ ಸದಸ್ಯರಾಗಿ ಸುನಿತಾ ಜಗದೀಶ್ ನೇಮಕ ಗೊಂಡಿದ್ದಾರೆ.
ಕಡೂರು ತಾಲೂಕು ಹಿರೇನಲ್ಲೂರಿನವರಾದ ಸುನಿತಾ ಕಳೆದ 23 ವರ್ಷಗಳಿಂದ ತಮ್ಮದೇ ವಿದ್ಯಾ ಸಂಸ್ಥೆ ಮುಖಾಂತರ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ .
10 ವರ್ಷಗಳ ಕಾಲ ಹಿರೇನಲ್ಲೂರು ಗ್ರಾಮ ಪಂಚಾಯಿತಿ, APMCಸದಸ್ಯರಾಗಿ, ಸುಗ್ರಾಮ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಪ್ರತಿನಿಧಿಗಳ ಸಂಘದ ರಾಜ್ಯ ಕಾರ್ಯದರ್ಶಿಯು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಬಿಜೆಪಿಯಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಜಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ.