ಚಿಕ್ಕಮಗಳೂರು: ಕೆರೆಗೆ ಬಿದ್ದು ಮೇಲೆ ಏಳಲಾಗದೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಜಿಂಕೆಯನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಯುವಕರು ರಕ್ಷಿಸಿ ಅರಣ್ಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.
ಮರ್ಕಲ್ ಗ್ರಾಮದಲ್ಲಿ ಕೆರೆಗೆ ಬಿದ್ದಿದ್ದ ಜಿಂಕೆಯನ್ನ ಕಂಡು ನಾಯಿಗಳು ತೀವ್ರವಾಗಿ ಬೊಗಳುತ್ತಿದ್ದವು. ಜಿಂಕೆ ನಾಯಿಗಳ ಕೈಗೆ ಸಿಕ್ಕಿದ್ದರೆ ಬಹುಶಃ ನಾಯಿಗಳ ದಾಳಿಗೆ ತುತ್ತಾಗುತ್ತಿತ್ತು.
ಗಾಬರಿಯಿಂದ ಓಡುವಾಗ ಆಯತಪ್ಪಿ ಕೆರೆಗೆ ಬಿದ್ದಿತ್ತು. ಕೆರೆಗೆ ಬಿದ್ದ ಜಿಂಕೆಯನ್ನು ಕಂಡು ಜಿಂಕೆಯನ್ನ ಸುತ್ತುವರಿದು ನಾಯಿಗಳು ಬೊಗಳುತ್ತಿದ್ದವು. ಇದನ್ನು ಗಮನಿಸಿದ ಮರ್ಕಲ್ ಗ್ರಾಮದ ಪ್ರಶಾಂತ್, ಜೈಪಾಲ್, ಶಶಿ, ಸವಿನ್ ಹಾಗೂ ಹಾಲಪ್ಪ ಕೆರೆಗೆ ಇಳಿದು ಜಿಂಕೆಗೆ ಹಗ್ಗ ಕಟ್ಟಿ ನಾಯಿಗಳನ್ನು ಓಡಿಸಿ ಜಿಂಕೆಯನ್ನು ಮೇಲೆ ಎಳೆದು ರಕ್ಷಿಸಿ ಜಿಂಕೆಯನ್ನು ಕಾಡಿಗೆ ಬಿಡುವಂತೆ ಅರಣ್ಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.
