ಚಿಕ್ಕಮಗಳೂರು : ಅಪರಿಚಿತ ವಾಹನ ಡಿಕ್ಕಿ ಹೊಡೆದು ಐದು ದನಗಳು ಸ್ಥಳದಲ್ಲೇ ಸಾವನ್ನಪ್ಪಿವೆ.
ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ–ಹೆಬ್ಬರಿಗೆ ರಸ್ತೆಯಲ್ಲಿ ನಿನ್ನೆ ರಾತ್ರಿ ಈ ದುರ್ಘಟನೆ ಸಂಭವಿಸಿದೆ.
ರಾತ್ರಿ ಮೋಡ ಕವಿದ ವಾತಾವರಣದಲ್ಲಿ, ರಸ್ತೆಯ ಮೇಲೆ ಮಲಗಿದ್ದ ದನಗಳನ್ನು ಗಮನಿಸದೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತದ ರಭಸಕ್ಕೆ ಐದು ರಾಸುಗಳು ಸ್ಥಳದಲ್ಲಿ ಸಾವನ್ನಪ್ಪಿದ್ದು ಎರಡು ಬದುಕುಳಿದರೂ ಗಂಭೀರ ಗಾಯಗಳಿಂದ ಬಳಲುತ್ತಿವೆ.
ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
